1 ಅರಸುಗಳು 21:10 - ಕನ್ನಡ ಸಮಕಾಲಿಕ ಅನುವಾದ10 ‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.” ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.