Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:13 - ಕನ್ನಡ ಸಮಕಾಲಿಕ ಅನುವಾದ

13 ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:13
38 ತಿಳಿವುಗಳ ಹೋಲಿಕೆ  

ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.


“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.


ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.


ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.


ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.


ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.


ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.


ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.


ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ.


ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.


ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.


ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.


ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,


ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು