18 “ನೀನೆದ್ದು ಸಮಾರ್ಯದಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆ ಎದುರಾಗಿ ಹೋಗು. ಅವನು ನಾಬೋತನ ದ್ರಾಕ್ಷಿ ತೋಟದಲ್ಲಿದ್ದಾನೆ. ಅದನ್ನು ಸ್ವಾಧೀನಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
18 ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
18 ಆತನು ಅವನಿಗೆ - ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೊಳ್ಳುವದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
18 “ಸಮಾರ್ಯದಲ್ಲಿ ಆಳುತ್ತಿರುವ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ಹೋಗು. ಅಹಾಬನು ಈಗ ನಾಬೋತನ ದ್ರಾಕ್ಷಿತೋಟದಲ್ಲಿದ್ದಾನೆ. ಆ ತೋಟವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅವನು ಅಲ್ಲಿಗೆ ಹೋಗಿದ್ದಾನೆ.
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.
ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.