1 ಅರಸುಗಳು 21:20 - ಕನ್ನಡ ಸಮಕಾಲಿಕ ಅನುವಾದ20 ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ. ಅಧ್ಯಾಯವನ್ನು ನೋಡಿ |