Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:25 - ಕನ್ನಡ ಸಮಕಾಲಿಕ ಅನುವಾದ

25 ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:25
26 ತಿಳಿವುಗಳ ಹೋಲಿಕೆ  

ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.


ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.


ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.


ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು.


ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.


ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.


ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.


ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.


ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.


ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು