Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:4 - ಕನ್ನಡ ಸಮಕಾಲಿಕ ಅನುವಾದ

4 “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. “ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು. ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:4
21 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು.


ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.


ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.


ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು.


ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದು ಉತ್ತಮ. ಗಾಳಿಯನ್ನು ಬೆನ್ನಟ್ಟಿದಂತೆ ಇದೂ ಕೂಡ ವ್ಯರ್ಥವೇ.


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು.


ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.


ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.


ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.


ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.


ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ, “ನೀನು ವ್ಯಸನವಾಗಿರುವುದೇಕೆ? ಯಾಕೆ ಊಟಮಾಡುವುದಿಲ್ಲ?” ಎಂದಳು.


ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.


ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು