Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:6 - ಕನ್ನಡ ಸಮಕಾಲಿಕ ಅನುವಾದ

6 ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಇಜ್ರೇಲಿನವನಾದ ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂಬದಾಗಿ ಹೇಳಿದೆನು; ಆದರೆ ಅವನು ಕೊಡುವದಿಲ್ಲ ಅಂದನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಹಾಬನು, “ನಾನು ಇಜ್ರೇಲಿನ ನಾಬೋತನಿಗೆ, ‘ನಿನ್ನ ತೋಟವನ್ನು ನನಗೆ ಕೊಡು. ಅದರ ಪೂರ್ಣ ಬೆಲೆಯನ್ನು ನಿನಗೆ ಕೊಡುತ್ತೇನೆ ಅಥವಾ ನೀನು ಬಯಸಿದರೆ, ನಿನಗೆ ಬೇರೊಂದು ತೋಟವನ್ನು ಕೊಡುತ್ತೇನೆ’ ಎಂದು ಹೇಳಿದೆನು. ಆದರೆ ನಾಬೋತನು ತನ್ನ ತೋಟವನ್ನು ನನಗೆ ಕೊಡಲಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:6
9 ತಿಳಿವುಗಳ ಹೋಲಿಕೆ  

ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.


ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.


ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.


ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ, “ನೀನು ವ್ಯಸನವಾಗಿರುವುದೇಕೆ? ಯಾಕೆ ಊಟಮಾಡುವುದಿಲ್ಲ?” ಎಂದಳು.


ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು