1 ಅರಸುಗಳು 22:17 - ಕನ್ನಡ ಸಮಕಾಲಿಕ ಅನುವಾದ17 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |