Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:2 - ಕನ್ನಡ ಸಮಕಾಲಿಕ ಅನುವಾದ

2 ಮೂರನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸ ಯೆಹೋಷಾಫಾಟನು ಇಸ್ರಯೇಲರ ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂರನೆಯ ವರುಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೂರನೆಯ ವರ್ಷದಲ್ಲಿ ಯೆಹೂದದ ರಾಜನಾದ ಯೆಹೋಷಾಫಾಟನು ಇಸ್ರೇಲಿನ ರಾಜನಾದ ಅಹಾಬನನ್ನು ಭೇಟಿಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:2
8 ತಿಳಿವುಗಳ ಹೋಲಿಕೆ  

ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ತಂದೆ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಅವನನ್ನು ಹೂಳಿಟ್ಟರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.


ಅರಾಮ್ಯರಿಗೂ, ಇಸ್ರಾಯೇಲರಿಗೂ ಮೂರು ವರ್ಷ ಯುದ್ಧ ನಡೆಯಲಿಲ್ಲ.


ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.


ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಸಂಗಡ ಸಮಾಧಾನ ಮಾಡಿಕೊಂಡನು.


ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು