1 ಅರಸುಗಳು 22:23 - ಕನ್ನಡ ಸಮಕಾಲಿಕ ಅನುವಾದ23 “ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡುನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೀಕಾಯೆಹು ಹೀಗೆ ಹೇಳಿದ ಮೇಲೆ, “ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.