1 ಅರಸುಗಳು 22:24 - ಕನ್ನಡ ಸಮಕಾಲಿಕ ಅನುವಾದ24 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |