Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:25 - ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೀಕಾಯೆಹು, “ಕೇಡು ಬೇಗನೆ ಬರಲಿದೆ. ಆಗ ನೀನು ಹೋಗಿ ಒಂದು ಚಿಕ್ಕ ಕೊಠಡಿಯಲ್ಲಿ ಅಡಗಿಕೊಳ್ಳುವೆ. ನಾನು ಸತ್ಯವನ್ನೇ ನುಡಿದೆನೆಂದು ಆಗ ನಿನಗೆ ತಿಳಿಯುತ್ತದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:25
13 ತಿಳಿವುಗಳ ಹೋಲಿಕೆ  

ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”


ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.


ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,


“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.


ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು