Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:31 - ಕನ್ನಡ ಸಮಕಾಲಿಕ ಅನುವಾದ

31 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:31
10 ತಿಳಿವುಗಳ ಹೋಲಿಕೆ  

ಇದಲ್ಲದೆ ನೀನು ಮಾಡಬೇಕಾದದ್ದೇನೆಂದರೆ, ಅರಸರನ್ನು ತೆಗೆದುಹಾಕಿ ಅವರಿಗೆ ಪ್ರತಿಯಾಗಿ ಅಧಿಪತಿಗಳನ್ನು ನೇಮಿಸಬೇಕು.


ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.


ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.


ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.


ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು