1 ಅರಸುಗಳು 22:39 - ಕನ್ನಡ ಸಮಕಾಲಿಕ ಅನುವಾದ39 ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು ಇವುಗಳ ವಿವರವೂ ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಆ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಆ ಪುಸ್ತಕವು ತಿಳಿಸುತ್ತದೆ. ಅಧ್ಯಾಯವನ್ನು ನೋಡಿ |