Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:48 - ಕನ್ನಡ ಸಮಕಾಲಿಕ ಅನುವಾದ

48 ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:48
18 ತಿಳಿವುಗಳ ಹೋಲಿಕೆ  

ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.


ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪು ಸಮುದ್ರತೀರದ ಏಲೋತ್ ಎಂಬ ಊರ ಬಳಿಯಲ್ಲಿರುವ ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.


ಅವರು ಓಫೀರಿಗೆ ಹೋಗಿ, ಅಲ್ಲಿಂದ ಹದಿನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಅರಸನಾದ ಸೊಲೊಮೋನನಿಗೆ ತೆಗೆದುಕೊಂಡು ಬಂದರು.


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ಎಲ್ಲಾ ತಾರ್ಷೀಷಿನ ಹಡಗುಗಳು ನೋಡತಕ್ಕ ಮನೋಹರವಾದ ಪ್ರತಿಯೊಂದು ನೌಕೆಗಳ ಮೇಲೆಯೂ ಆ ದಿನವು ತಪ್ಪದೇ ಬರುವುದು.


ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.


ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.


ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.


ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.


ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.


ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ.


ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.


ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.


ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು