1 ಅರಸುಗಳು 22:49 - ಕನ್ನಡ ಸಮಕಾಲಿಕ ಅನುವಾದ49 ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು - ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣಮಾಡುವದಕ್ಕೆ ಅಪ್ಪಣೆಯಾಗಲಿ ಎಂದು ಬೇಡಿಕೊಂಡನು; ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದದರಿಂದ ಓಫೀರನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯಮಾಡಲು ಹೋದನು. ಅಹಜ್ಯನು ಆ ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನ ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ. ಅಧ್ಯಾಯವನ್ನು ನೋಡಿ |