Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯೆಹೋವನ ಸಲಹೆಯನ್ನು ನಾವು ಮೊದಲು ಕೇಳಬೇಕಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:5
22 ತಿಳಿವುಗಳ ಹೋಲಿಕೆ  

“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.


ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.


ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.


ಇಸ್ರಾಯೇಲರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನು ಇಟ್ಟರು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಆಗ ಇಸ್ರಾಯೇಲರು ಅವರ ಆಹಾರದಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಅವರು ಯೆಹೋವ ದೇವರಿಂದ ಆಲೋಚನೆಯನ್ನು ಕೇಳಲಿಲ್ಲ.


ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.


ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು