Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:53 - ಕನ್ನಡ ಸಮಕಾಲಿಕ ಅನುವಾದ

53 ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಯೇಲರ ದೇವರಾದ ಸರ್ವೇಶ್ವರನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ಯರ ದೇವರಾದ ಯೆಹೋವನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:53
14 ತಿಳಿವುಗಳ ಹೋಲಿಕೆ  

ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು.


ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆಯಂತೆ, ತನ್ನ ತಾಯಿಯಂತೆ ಮಾಡಲಿಲ್ಲ. ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.


ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.


ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.


ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು