Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:6
22 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.


ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.


ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.


ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.


ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು.


ಆದ್ದರಿಂದ ಬಾಳನ ಸಮಸ್ತ ಪ್ರವಾದಿಗಳನ್ನೂ, ಅವನ ಸಮಸ್ತ ಸೇವಕರನ್ನೂ, ಅವನ ಸಮಸ್ತ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ. ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು,” ಎಂದನು. ಏಕೆಂದರೆ ಯೇಹುವು ಬಾಳನನ್ನು ಸೇವಿಸುವವರನ್ನು ನಾಶಮಾಡುವಂತೆ ಇದನ್ನು ತಂತ್ರದಿಂದ ಮಾಡಿದನು.


ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.


ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು