1 ಅರಸುಗಳು 22:8 - ಕನ್ನಡ ಸಮಕಾಲಿಕ ಅನುವಾದ8 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |