1 ಅರಸುಗಳು 3:12 - ಕನ್ನಡ ಸಮಕಾಲಿಕ ಅನುವಾದ12 ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |