Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:9 - ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:9
36 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.


ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”


ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ನಿಮ್ಮ ಶಾಸನಗಳು ಯಾವಾಗಲೂ ನೀತಿಯುಕ್ತವಾಗಿವೆ; ನಾನು ಬದುಕುವಂತೆ ನನಗೆ ವಿವೇಕವನ್ನು ಕೊಡಿರಿ.


ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.


ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.


ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.


ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.


ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.


ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು.


ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು.


ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು