Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:11 - ಕನ್ನಡ ಸಮಕಾಲಿಕ ಅನುವಾದ

11 ಬೆನ್ ಅಬೀನಾದಾಬ್ ನಾಫೋತ್ ದೋರ್‌ದಲ್ಲಿ ಅಧಿಕಾರಿ. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೋರ್‍ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗನು; ಸೊಲೊಮೋನನ ಮಗಳಾದ ಟಾಫತಳು ಇವನ ಹೆಂಡತಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾಫೋತ್ ದೋರ್‌ಗೆ ಬೆನ್‌ಅಬೀನಾದಾಬನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:11
9 ತಿಳಿವುಗಳ ಹೋಲಿಕೆ  

ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ


ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.


ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. ಗಿಲ್ಗಾಲದಲ್ಲಿಯ ಗೊಯ್ಮದ ಅರಸನು.


ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.


ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ, ಸಮೀಪ ರಾಜ್ಯಗಳ ಅರಸರಿಗೆ ಒಂದು ಸಂದೇಶವನ್ನು ಕಳುಹಿಸಿದನು: ಎಂದರೆ ಮಾದೋನಿನ ಅರಸನಾದ ಯೋಬಾಬನಿಗೂ ಶಿಮ್ರೋನಿನ ಅರಸನಿಗೂ ಅಕ್ಷಾಫಿನ ಅರಸನಿಗೂ


ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು.


ಆಗ ಇಷಯನು ಅಬೀನಾದಾಬನನ್ನು ಕರೆದು ಅವನನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಅವನು ಇವನನ್ನು, “ಯೆಹೋವ ದೇವರು ಆರಿಸಿಕೊಳ್ಳಲಿಲ್ಲ,” ಎಂದನು.


ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು, “ಇವನನ್ನು ಯೆಹೋವ ದೇವರು ಆಯ್ದುಕೊಳ್ಳಲಿಲ್ಲ,” ಎಂದನು.


ಅಹೀಮಾಚ್ ನಫ್ತಾಲಿಯಲ್ಲಿ ಅಧಿಕಾರಿ. ಅವನಿಗೆ ಸೊಲೊಮೋನನ ಮಗಳಾದ ಬಾಸೆಮತ್ ಹೆಂಡತಿಯಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು