Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:22 - ಕನ್ನಡ ಸಮಕಾಲಿಕ ಅನುವಾದ

22 ಸೊಲೊಮೋನನು ಒಂದು ದಿನದ ಭೋಜನಕ್ಕೆ ಕೊಡುತ್ತಿದ್ದ ಆಹಾರ ಪದಾರ್ಥಗಳು 5,000 ಕಿಲೋಗ್ರಾಂ ನಯವಾದ ಗೋಧಿಯ ಹಿಟ್ಟು, 10,000 ಕಿಲೋಗ್ರಾಂ ಜವೆಗೋಧಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗಿದ್ದ ಆಹಾರಪದಾರ್ಥಗಳ ಪಟ್ಟಿ: ಐದು ಸಾವಿರ ಲೀಟರ್ ಗೋದಿಯ ಹಿಟ್ಟು, ಹತ್ತು ಸಾವಿರ ಲೀಟರ್ ಜವೆಗೋದಿಯ ಹಿಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗುವ ಆಹಾರಪದಾರ್ಥಗಳು - ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆ ಗೋದಿಯ ಹಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 ಪ್ರತಿದಿನವೂ ಸೊಲೊಮೋನನಿಗೆ ಮತ್ತು ಅವನ ಪಂಕ್ತಿಯಲ್ಲಿ ಊಟಮಾಡುವವರಿಗೆ ಬೇಕಾದ ಆಹಾರಪದಾರ್ಥಗಳು ಹೀಗಿವೆ: ನೂರೈವತ್ತು ಬುಷೆಲ್ಸ್ ಉತ್ತಮವಾದ ಗೋಧಿಯ ಹಿಟ್ಟು; ಮುನ್ನೂರು ಬುಷೆಲ್ಸ್ ಹಿಟ್ಟು; ಚೆನ್ನಾಗಿ ಮೇಯಿಸಿದ ಹತ್ತು ಹಸುಗಳು; ಹೊಲಗಳಲ್ಲಿ ಮೇಯಿಸಿದ ಇಪ್ಪತ್ತು ಹಸುಗಳು; ನೂರು ಕುರಿಗಳು; ಇವುಗಳಲ್ಲದೆ ದುಪ್ಪಿ, ಜಿಂಕೆ, ಸಾರಂಗ ಮತ್ತು ಕೊಬ್ಬಿದ ಕೋಳಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:22
10 ತಿಳಿವುಗಳ ಹೋಲಿಕೆ  

ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಕೊಬ್ಬಿದ ಎತ್ತುಗಳು ಹತ್ತು, ಮೇಯುವ ಎತ್ತುಗಳು ಇಪ್ಪತ್ತು, ಕುರಿಗಳು ನೂರು. ಇವುಗಳ ಹೊರತಾಗಿ ದುಪ್ಪಿಗಳೂ, ಜಿಂಕೆಗಳೂ, ಕೆಂದ ಜಿಂಕೆಗಳೂ, ಕೊಬ್ಬಿದ ಕೋಳಿಗಳೂ ಆಗಿದ್ದವು.


ಪ್ರತಿದಿನಕ್ಕೆ ಒಂದು ಎತ್ತು, ಉತ್ತಮವಾದ ಆರು ಕುರಿಗಳು, ಕೋಳಿಗಳು, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವು ನನಗೋಸ್ಕರ ಸಿದ್ಧವಾಗುತ್ತಿದ್ದವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದುದರಿಂದ ನಾನು ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ಬೇಡಲಿಲ್ಲ.


ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.


ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬುವುದು.


ಸೊತ್ತು ಹೆಚ್ಚಿದರೆ, ಅದನ್ನು ಅನುಭವಿಸುವವರು ಹೆಚ್ಚಾಗುವರು. ಯಜಮಾನರು ಅದನ್ನು ತಮ್ಮ ಕಣ್ಣಿಂದ ನೋಡುವುದೇ ಅವರಿಗಾಗುವ ಲಾಭ, ಬೇರೆ ಯಾವ ಪ್ರಯೋಜನವಿದೆ?


ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು