Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:5 - ಕನ್ನಡ ಸಮಕಾಲಿಕ ಅನುವಾದ

5 ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾತಾನನ ಮಗನಾದ ಅಜರ್ಯನು ಪ್ರದೇಶಾಧಿಪತಿಗಳ ಮುಖ್ಯಸ್ಥನು; ನಾತಾನನ ಮಗನಾದ ಜಾಬೂದನು ಯಾಜಕನೂ ಅರಸನ ವಿುತ್ರನೂ ಆಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:5
17 ತಿಳಿವುಗಳ ಹೋಲಿಕೆ  

ಅರಸನ ಆಲೋಚನೆಗಾರನು ಅಹೀತೋಫೆಲ್; ಅರಸನ ಆಪ್ತ ಸ್ನೇಹಿತನು ಅರ್ಕಿಯನಾದ ಹೂಷೈ.


ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು.


ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣದೊಳಗೆ ಬಂದನು. ಆಗ ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.


ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.


ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.


ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.


ಯಾಯೀರಿನವನಾದ ಈರನೂ ದಾವೀದನ ಯಾಜಕನಾಗಿದ್ದನು.


ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.


ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಅಹಿಷಾರನು ರಾಜ್ಯ ಗೃಹಾಧಿಪತಿ. ಅಬ್ದನ ಮಗ ಅದೋನೀರಾಮನು ದಾಸರ ಮೇಲೆ ಉಸ್ತುವಾರಿಮಾಡಿಸುವವನಾಗಿದ್ದನು.


ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು