Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:11 - ಕನ್ನಡ ಸಮಕಾಲಿಕ ಅನುವಾದ

11 ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೊಲೊಮೋನನಾದರೋ ಪ್ರತಿವರ್ಷ ಅವನ ಮನೆಯವರ ಆಹಾರಕ್ಕಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿಯನ್ನೂ ನಾಲ್ಕು ಸಾವಿರ ಲೀಟರ್ ಅಪ್ಪಟ ಎಣ್ಣೆಯನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೊಲೊಮೋನನಾದರೋ ಪ್ರತಿವರುಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:11
9 ತಿಳಿವುಗಳ ಹೋಲಿಕೆ  

ಮರ ಕಡಿಯುವ ನಿನ್ನ ಸೇವಕರಿಗಾಗಿ, ಎರಡು ಸಾವಿರ ಟನ್ ಗೋಧಿಯನ್ನೂ, ಮೂರು ಸಾವಿರ ಟನ್ ಜವೆಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ದ್ರಾಕ್ಷಾರಸವನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು,” ಎಂದು ಹೇಳಿಸಿದನು.


ಸೊಲೊಮೋನನು ಒಂದು ದಿನದ ಭೋಜನಕ್ಕೆ ಕೊಡುತ್ತಿದ್ದ ಆಹಾರ ಪದಾರ್ಥಗಳು 5,000 ಕಿಲೋಗ್ರಾಂ ನಯವಾದ ಗೋಧಿಯ ಹಿಟ್ಟು, 10,000 ಕಿಲೋಗ್ರಾಂ ಜವೆಗೋಧಿ,


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.


ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.


ಮೆರಾರೀಯ ವಂಶಜರು: ಮಹ್ಲೀ, ಅವನ ಮಗ ಲಿಬ್ನೀ, ಅವನ ಮಗ ಶಿಮ್ಮಿ; ಅವನ ಮಗ ಉಜ್ಜ,


ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು