Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:15 - ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಸೊಲೊಮೋನನಿಗೆ ಎಪ್ಪತ್ತು ಸಾವಿರಮಂದಿ ಹೊರೆಹೊರುವವರೂ ಎಂಬತ್ತು ಸಾವಿರಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:15
13 ತಿಳಿವುಗಳ ಹೋಲಿಕೆ  

ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.


ಸೊಲೊಮೋನನ ಸೇವಕರ ವಂಶಜರು: ಸೋಟೈ, ಸೋಫೆರೆತ್, ಪೆರೀದ,


ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.


ಅದು ಏನೆಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರು ಜೀವದಿಂದ ಇರಲಿ. ಆದರೆ ಅವರು ಇಸ್ರಾಯೇಲಿನ ಎಲ್ಲಾ ಸಮೂಹಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಪ್ರಧಾನರ ಮಾತಿನಂತೆಯೇ ಆಯಿತು.


ಅದಕ್ಕಾಗಿ 70,000 ಹೊರುವವರನ್ನೂ, 80,000 ಬೆಟ್ಟದಲ್ಲಿ ಕಡಿಯುವವರನ್ನೂ, ಇವರ ಮೇಲೆ ಕಾವಲಾಗಿರಲು 3,600 ಮಂದಿಯನ್ನೂ ಆಯ್ಕೆಮಾಡಿದನು.


ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.


ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.


ಯೆಹೋವ ದೇವರಿಗೋಸ್ಕರ ಒಂದು ಆಲಯವನ್ನೂ, ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ಸೊಲೊಮೋನನು ಅಪ್ಪಣೆಕೊಟ್ಟನು.


ಅರಸನ ಮಗಳು ತನ್ನ ಅಂತಃಪುರದಲ್ಲಿ ಪೂರ್ಣ ವೈಭವದಿಂದ ಇದ್ದಾಳೆ. ಅವಳ ವಸ್ತ್ರವು ಚಿನ್ನದಿಂದ ನೇಯ್ದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು