Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:3 - ಕನ್ನಡ ಸಮಕಾಲಿಕ ಅನುವಾದ

3 “ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಅನುಗ್ರಹದಿಂದ ತಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ಸುತ್ತಲೂ ಯುದ್ಧಗಳನ್ನು ನಡಿಸಬೇಕಾಗಿದ್ದದರಿಂದ ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದ್ದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:3
17 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.


ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.


ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.


ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:


ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.


ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರೂ, ಯೆಹೂದ್ಯರೂ, ಅಧಿಕಾರಿಗಳೂ ನೂರ ಐವತ್ತು ಮಂದಿ ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.


ಪ್ರತಿದಿನಕ್ಕೆ ಒಂದು ಎತ್ತು, ಉತ್ತಮವಾದ ಆರು ಕುರಿಗಳು, ಕೋಳಿಗಳು, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವು ನನಗೋಸ್ಕರ ಸಿದ್ಧವಾಗುತ್ತಿದ್ದವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದುದರಿಂದ ನಾನು ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ಬೇಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು