Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:7 - ಕನ್ನಡ ಸಮಕಾಲಿಕ ಅನುವಾದ

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:7
17 ತಿಳಿವುಗಳ ಹೋಲಿಕೆ  

ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು; ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು.


ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.


ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ. ಬುದ್ಧಿಹೀನನಾದರೋ ತನ್ನ ತಾಯಿಯನ್ನು ತಿರಸ್ಕರಿಸುತ್ತಾನೆ.


ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.


ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.


ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.


ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.


ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.


“ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.


ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.


ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು