Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:12 - ಕನ್ನಡ ಸಮಕಾಲಿಕ ಅನುವಾದ

12 “ನೀನು ಕಟ್ಟಿಸುವ ಈ ಆಲಯವನ್ನು ಕುರಿತು ನನ್ನ ಕಟ್ಟಳೆಗಳಲ್ಲಿ ನಡೆದು, ನನ್ನ ನ್ಯಾಯಗಳ ಪ್ರಕಾರಮಾಡಿ, ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಗೊಂಡರೆ, ನಾನು ನಿನ್ನ ತಂದೆ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:12
16 ತಿಳಿವುಗಳ ಹೋಲಿಕೆ  

ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”


ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿನ್ನ ಸಂತಾನದವರು ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.


“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ?


ಆಗ ಯೆಹೋವ ದೇವರ ವಾಕ್ಯವು ಸೊಲೊಮೋನನಿಗೆ ಬಂದಿತು,


ಅನ್ಯದೇವರುಗಳ ಹಿಂದೆ ಹೋಗಬಾರದೆಂದು ಅವರು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದರೂ, ಅವನು, ಯೆಹೋವ ದೇವರು ಆಜ್ಞಾಪಿಸಿದ್ದನ್ನು ಕೈಗೊಳ್ಳದೆ ಹೋದನು.


ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು