1 ಅರಸುಗಳು 6:16 - ಕನ್ನಡ ಸಮಕಾಲಿಕ ಅನುವಾದ16 ಅವನು ಆಲಯದ ಕಡೆಗಳಲ್ಲಿ 9 ಮೀಟರ್ ನೆಲವನ್ನೂ, ಗೋಡೆಗಳನ್ನೂ, ದೇವದಾರುಗಳ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಅತಿ ಪರಿಶುದ್ಧಸ್ಥಳದ ಅಂಗನ ಅಥವಾ ಮಹಾಪರಿಶುದ್ಧ ಸ್ಥಳವೆಂದು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಿಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು. ಅಧ್ಯಾಯವನ್ನು ನೋಡಿ |