Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:23 - ಕನ್ನಡ ಸಮಕಾಲಿಕ ಅನುವಾದ

23 ಅವನು ದೈವೋಕ್ತಿಯ ಸ್ಥಾನದಲ್ಲಿ ಹಿಪ್ಪೇಮರಗಳಿಂದ ಎರಡು ಕೆರೂಬಿಗಳನ್ನು ಮಾಡಿಸಿದನು. ಒಂದೊಂದು 4.4 ಮೀಟರ್ ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಅವನು ಎಣ್ಣೇಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಗರ್ಭಗೃಹದಲ್ಲಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:23
14 ತಿಳಿವುಗಳ ಹೋಲಿಕೆ  

ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


“ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.


ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು.


ಅವನು ದೈವೋಕ್ತಿಯ ಸ್ಥಾನದ ಬಾಗಿಲಿಗೆ ಹಿಪ್ಪೇಮರಗಳಿಂದ ಜೋಡು ಬಾಗಿಲುಗಳನ್ನು ಮಾಡಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.


ಹಿಪ್ಪೇಮರದ ಆ ಜೋಡು ಬಾಗಿಲುಗಳ ಮೇಲೆ ಅವನು ಕೆರೂಬಿ, ಖರ್ಜೂರದ ವೃಕ್ಷ, ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಆ ಕೆರೂಬಿಗಳನ್ನೂ, ಖರ್ಜೂರ ಗಿಡಗಳನ್ನೂ, ಬಂಗಾರದ ತಗಡಿನಿಂದ ಹೊದಿಸಿದನು.


ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು