Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:38 - ಕನ್ನಡ ಸಮಕಾಲಿಕ ಅನುವಾದ

38 ಹನ್ನೊಂದನೆಯ ವರ್ಷದ, ಎಂಟನೆಯ ತಿಂಗಳಾದ ಬೂಲ್ ಎಂಬ ಕಾರ್ತಿಕ ತಿಂಗಳಲ್ಲಿ ಆ ದೇವಾಲಯದ ಎಲ್ಲಾ ಭಾಗಗಳೂ ಯೋಜನೆಯ ಪ್ರಕಾರ ಕಟ್ಟಲಾಯಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹನ್ನೊಂದನೆಯ ವರುಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವದಕ್ಕೆ ಏಳು ವರುಷ ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೇ ತಿಂಗಳಾದ ಬುಲ್ (ಕಾರ್ತಿಕ) ತಿಂಗಳಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:38
19 ತಿಳಿವುಗಳ ಹೋಲಿಕೆ  

“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ಇದಲ್ಲದೆ ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.


ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳಾದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು.


ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.


ಸೊಲೊಮೋನನು ಆಲಯವನ್ನು ಕಟ್ಟಿಸಿ, ತೀರಿಸಿದನು.


ನಾಲ್ಕನೆಯ ವರ್ಷದ ಜಿವ್ ತಿಂಗಳಲ್ಲಿ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾಯಿತು.


ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಆ ಎರಡು ಮನೆಗಳನ್ನು ಅಂದರೆ, ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ


ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ.


ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಇಸ್ರಾಯೇಲರು ಈ ಕೆಲಸಗಳನ್ನೆಲ್ಲಾ ಮಾಡಿದರು.


ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


“ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ,


ಯೆಹೋವ ದೇವರ ಆಲಯದ ಅಸ್ತಿವಾರ ಹಾಕಿದ ದಿವಸದವರೆಗೂ ಅದನ್ನು ಕಟ್ಟಿಸಿ ತೀರಿಸುವವರೆಗೂ ಸೊಲೊಮೋನನ ಕೆಲಸವೆಲ್ಲಾ ಮುಗಿದು, ಯೆಹೋವ ದೇವರ ಆಲಯವು ಸಿದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು