1 ಅರಸುಗಳು 6:5 - ಕನ್ನಡ ಸಮಕಾಲಿಕ ಅನುವಾದ5 ಕಟ್ಟಡದ ಹೊರಗಿನ ಗೋಡೆಗಳ ಸುತ್ತಲೂ, ಸೊಲೊಮೋನನು ಅನೇಕ ಕೋಣೆಗಳ ಸಂಕೀರ್ಣವನ್ನು ಎರಡೂ ಬದಿಗಳಲ್ಲಿ ನಿರ್ಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವಾಲಯದ ಗೋಡೆಯ ಸುತ್ತಲೂ ಅಂದರೆ, ಪರಿಶುದ್ಧಸ್ಥಳ ಹಾಗು ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧಸ್ಥಳ, ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು. ಅಧ್ಯಾಯವನ್ನು ನೋಡಿ |
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.