Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:6 - ಕನ್ನಡ ಸಮಕಾಲಿಕ ಅನುವಾದ

6 ಕೆಳಗಿರುವ ಕೊಠಡಿಯು 2.2 ಮೀಟರ್ ಅಗಲ, ಎರಡನೆಯದು 2.7 ಮೀಟರ್ ಅಗಲ, ಮೂರನೆಯದು 3.1 ಮೀಟರ್ ಅಗಲ. ಏಕೆಂದರೆ ತೊಲೆಗಳು ಆಲಯದ ಗೋಡೆಗಳಲ್ಲಿ ತಗಲದ ಹಾಗೆ ಆಲಯದ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕೆಳಗಿನ ಕೊಠಡಿಗಳ ಅಗಲ 2:2 ಮೀಟರ್; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲ 2:7 ಮೀಟರ್; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲ 3:1 ಮೀಟರ್. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದು ಎಂದು ಗೋಡೆಯ ಹೊರ ಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೆಳಗಿನ ಕೊಠಡಿಗಳ ಅಗಲವು ಐದು ಮೊಳ; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲವು ಆರು ಮೊಳ; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದೆಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಕೊಠಡಿಗಳು ದೇವಾಲಯದ ಗೋಡೆಯನ್ನು ಸ್ಪರ್ಶಿಸಿದರೂ, ಅವುಗಳ ತೊಲೆಗಳು ಗೋಡೆಯಲ್ಲಿ ಸೇರಿಕೊಂಡಿರಲಿಲ್ಲ. ಆ ದೇವಾಲಯದ ಗೋಡೆಯ ಮೇಲ್ಭಾಗವು ತೆಳುವಾಗಿತ್ತು. ಆ ಕೊಠಡಿಗಳ ಒಂದು ಕಡೆಯ ಗೋಡೆಯು, ಅದರ ಕೆಳಭಾಗದ ಗೋಡೆಗಿಂತ ತೆಳುವಾಗಿತ್ತು. ಕೆಳ ಅಂತಸ್ತಿನ ಕೊಠಡಿಗಳ ಅಗಲ ಏಳುವರೆ ಅಡಿಗಳು. ಮಧ್ಯದ ಅಂತಸ್ತಿನ ಕೊಠಡಿಗಳ ಅಗಲ ಒಂಭತ್ತು ಅಡಿಗಳು. ಅದರ ಮೇಲಿನ ಕೊಠಡಿಗಳ ಅಗಲ ಹತ್ತೂವರೆ ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:6
4 ತಿಳಿವುಗಳ ಹೋಲಿಕೆ  

ಕಟ್ಟಡದ ಹೊರಗಿನ ಗೋಡೆಗಳ ಸುತ್ತಲೂ, ಸೊಲೊಮೋನನು ಅನೇಕ ಕೋಣೆಗಳ ಸಂಕೀರ್ಣವನ್ನು ಎರಡೂ ಬದಿಗಳಲ್ಲಿ ನಿರ್ಮಿಸಿದನು.


ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ.


ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ಪಕ್ಕದ ಕೋಣೆಗಳಿಗೆ ಆಧಾರವಾಗಿ ದೇವಾಲಯದ ಗೋಡೆಯ ಸುತ್ತಲೂ ಮುಂಚಾಚಿರುವಿಕೆಗಳು ಇದ್ದವು. ಇದರಿಂದಾಗಿ ಪೋಷಕ ಭಾಗಗಳನ್ನು ದೇವಾಲಯದ ಗೋಡೆಯೊಳಗೆ ಸೇರಿಸಲಾಗಿಲ್ಲ.


ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು