Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:12 - ಕನ್ನಡ ಸಮಕಾಲಿಕ ಅನುವಾದ

12 ದೊಡ್ಡ ಅಂಗಳವು ಸುತ್ತಲೂ ಮೂರು ತರ ಕೆತ್ತಿದ ಕಲ್ಲುಗಳೂ, ಒಂದು ತರ ದೇವದಾರು ಮರದ ತೊಲೆಗಳೂ ಆಗಿದ್ದವು. ಯೆಹೋವ ದೇವರ ಆಲಯದ ಒಳ ಅಂಗಳಕ್ಕೂ, ಆಲಯದ ಮಂಟಪಕ್ಕೂ ಹಾಗೆಯೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಳಗಣ ಪ್ರಾಕಾರವೆನಿಸಿಕೊಳ್ಳುವ ಸರ್ವೇಶ್ವರನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಳಗಣ ಪ್ರಾಕಾರವೆನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರುವಿನ ಮರದ ಕಂಬಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಈ ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:12
9 ತಿಳಿವುಗಳ ಹೋಲಿಕೆ  

ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.


ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.


ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.


ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು.


ಅದರ ಮೇಲೆ ಕೆತ್ತಿದ ಕಲ್ಲುಗಳ ಅಳತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ, ದೇವದಾರು ತೊಲೆಗಳೂ ಇದ್ದವು.


ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ಮಂದಿರದ ಮುಂದೆ ಮಂಟಪವಿತ್ತು. ಅದು ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು. ಆಲಯದ ಮುಂದೆ ಇರುವ ಅದರ ಅಗಲವು 4.5 ಮೀಟರ್.


ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು