Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:27 - ಕನ್ನಡ ಸಮಕಾಲಿಕ ಅನುವಾದ

27 ಅವನು ಹತ್ತು ಕಂಚಿನ ಚಲಿಸುವ ಪೀಠಗಳನ್ನು ಮಾಡಿದನು. ಒಂದೊಂದು ಪೀಠವು 1.8 ಮೀಟರ್ ಉದ್ದವೂ, 1.8 ಮೀಟರ್ ಅಗಲವೂ, 1.4 ಮೀಟರ್ ಎತ್ತರವೂ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದಲ್ಲದೆ, ಹೀರಾಮನು ಹತ್ತು ಕಂಚಿನ ಪೀಠಗಳನ್ನು ಮಾಡಿದನು. ಪ್ರತಿಯೊಂದು 1:8 ಮೀಟರ್ ಉದ್ದ, 1:8 ಮೀಟರ್ ಅಗಲ, 1:3 ಮೀಟರ್ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಪ್ರತಿಯೊಂದರ ಉದ್ದ ಆರು ಅಡಿಗಳು; ಅಗಲ ಆರು ಅಡಿಗಳು; ಮತ್ತು ಎತ್ತರ ನಾಲ್ಕುವರೆ ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:27
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಪೀಠಗಳನ್ನು ಅವುಗಳ ಮೇಲಿರುವ ತೊಟ್ಟಿಗಳನ್ನು ಮಾಡಿದನು.


ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಎಲ್ಲಾ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ನೀರನ್ನು ಸಂಗ್ರಹಿಸಲು ಮಾಡಿದ ದೊಡ್ಡ ಕಂಚಿನ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.


ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.


ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.


ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ನಾಲ್ವತ್ತು ನಾಲ್ಕು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.


ಆ ಪೀಠಗಳ ಮೇಲಿರುವ ಕೆಲಸ ಹೇಗೆಂದರೆ, ಅವುಗಳಿಗೆ ಅಂಚುಗಳಿದ್ದವು. ಅವು ಅಂಚುಗಳ ಹಲಗೆಗಳ ನಡುವೆ ಇದ್ದವು.


ಅರಸನಾದ ಆಹಾಜನು ಪೀಠದ ಅಂಚುಗಳನ್ನು ಕೊಯ್ದು, ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ಅದರ ಮೇಲಿನಿಂದ ಇಳಿಸಿ, ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು