1 ಅರಸುಗಳು 7:29 - ಕನ್ನಡ ಸಮಕಾಲಿಕ ಅನುವಾದ29 ಹಲಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ, ಎತ್ತುಗಳೂ, ಕೆರೂಬಿಗಳೂ ಇದ್ದವು. ಹಲಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು. ಸಿಂಹಗಳಿಗೂ, ಎತ್ತುಗಳಿಗೂ ಕೆಳಭಾಗದಲ್ಲಿ ತೋರಣಗಳು ಅದರ ಸಂಗಡ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ, ಕೆರೂಬಿ, ಇವುಗಳ ಚಿತ್ರಗಳಿದ್ದವು; ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು; ಸಿಂಹ, ಹೋರಿ, ಇವುಗಳ ಮೇಲೂ ಕೆಳಗೂ ತೋರಣಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ, ಕೆರೂಬಿ ಇವುಗಳ ಚಿತ್ರಗಳಿದ್ದವು; ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು; ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅಂಕಣದ ಮತ್ತು ಚೌಕಟ್ಟಿನ ಮೇಲೆ ಹಿತ್ತಾಳೆಯ ಸಿಂಹಗಳು, ಹೋರಿಗಳು ಮತ್ತು ಕೆರೂಬಿಗಳಿದ್ದವು. ಸಿಂಹಗಳ, ಹೋರಿಗಳ ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಹೂವಿನಾಕಾರದಲ್ಲಿ ಹಿತ್ತಾಳೆಯ ಮೇಲೆ ಕೆತ್ತಿದ್ದನು. ಅಧ್ಯಾಯವನ್ನು ನೋಡಿ |