1 ಅರಸುಗಳು 7:30 - ಕನ್ನಡ ಸಮಕಾಲಿಕ ಅನುವಾದ30 ಒಂದೊಂದು ಪೀಠಕ್ಕೆ ನಾಲ್ಕು ಕಂಚಿನ ಗಾಲಿಗಳೂ, ಕಂಚಿನ ಅಚ್ಚುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಹೂಗಳ ತೋರಣಗಳ ಜೋಡಣೆಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಿನ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಿನ ನೀರಿನ ಬಾನೆಯನ್ನು ಹಿಡಿಯುತ್ತಿದ್ದವು. ಅವುಗಳ ಹೊರ ಮೈಗೆ ತೋರಣಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಪ್ರತಿಯೊಂದು ಬಂಡಿಗೂ ನಾಲ್ಕು ಹಿತ್ತಾಳೆಯ ಗಾಲಿಗಳು ಮತ್ತು ಅಚ್ಚುಗಳು ಇದ್ದವು. ಆ ದೊಡ್ಡ ಪಾತ್ರೆಯ ಮೂಲೆಗಳಲ್ಲಿ ಹಿತ್ತಾಳೆಯ ಆಧಾರ ಕಂಬಗಳಿದ್ದವು. ಈ ಕಂಬಗಳ ಹಿತ್ತಾಳೆಯ ಮೇಲ್ಭಾಗವು ಹೂವಿನಾಕಾರದಲ್ಲಿ ಕೆತ್ತಲಾಗಿತ್ತು. ಅಧ್ಯಾಯವನ್ನು ನೋಡಿ |