1 ಅರಸುಗಳು 7:36 - ಕನ್ನಡ ಸಮಕಾಲಿಕ ಅನುವಾದ36 ಅದರದರ ಪ್ರಮಾಣದ ಪ್ರಕಾರ ಹಲಗೆಗಳ ಕೈಹಿಡಿಗಳ ಮೇಲೆಯೂ ಅಂಚುಗಳ ಮೇಲೆಯೂ ಕೆರೂಬಿ, ಸಿಂಹ ಖರ್ಜೂರ ವೃಕ್ಷಗಳನ್ನು ಚಿತ್ರಿಸಿದನು. ಸುತ್ತಲೂ ಅದರದರ ಪ್ರಮಾಣದ ಪ್ರಕಾರ ಪುಷ್ಪ ತೋರಣಗಳನ್ನು ಚಿತ್ರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆ ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ, ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರ ಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಈ ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು. ಅಧ್ಯಾಯವನ್ನು ನೋಡಿ |