Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:40 - ಕನ್ನಡ ಸಮಕಾಲಿಕ ಅನುವಾದ

40 ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಒಟ್ಟು ಸಾಮಾನುಗಳು ಯಾವುವೆಂದರೆ :-

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಒಟ್ಟು ಸಾಮಾನುಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಹೀರಾಮನು ಗುಂಬಗಳನ್ನು, ಚಿಕ್ಕ ಸಲಿಕೆಗಳನ್ನು ಮತ್ತು ಚಿಕ್ಕ ಗಂಗಾಳಗಳನ್ನು ಮಾಡಿದನು. ರಾಜನಾದ ಸೊಲೊಮೋನನು ಅಪೇಕ್ಷಿಸಿದ್ದ ವಸ್ತುಗಳನ್ನೆಲ್ಲ ಹೀರಾಮನು ಮಾಡಿ ಮುಗಿಸಿದನು. ಯೆಹೋವನ ದೇವಾಲಯಕ್ಕಾಗಿ ಹೀರಾಮನು ಮಾಡಿದ ವಸ್ತುಗಳ ಪಟ್ಟಿ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:40
12 ತಿಳಿವುಗಳ ಹೋಲಿಕೆ  

ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು.


ಆ ಪೀಠಗಳ ಮೇಲಿರುವ ಕೆಲಸ ಹೇಗೆಂದರೆ, ಅವುಗಳಿಗೆ ಅಂಚುಗಳಿದ್ದವು. ಅವು ಅಂಚುಗಳ ಹಲಗೆಗಳ ನಡುವೆ ಇದ್ದವು.


ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿದನು ಮತ್ತು ರಕ್ತದಲ್ಲಿ ಮಿಕ್ಕ ಅರ್ಧವನ್ನು ಬಲಿಪೀಠದ ಮೇಲೆ ಚಿಮುಕಿಸಿದನು.


ಆಲಯದ ದಕ್ಷಿಣ ದಿಕ್ಕಿಗೆ ಐದು ಪೀಠಗಳನ್ನೂ, ಆಲಯದ ಉತ್ತರ ದಿಕ್ಕಿಗೆ ಐದು ಪೀಠಗಳನ್ನೂ ಇಟ್ಟನು. ಆದರೆ ಜಲಾಶಯವನ್ನು ಆಲಯದ ದಕ್ಷಿಣ ದಿಕ್ಕಿಗೆ ಅಂದರೆ ಆಲಯದ ಆಗ್ನೇಯ ಮೂಲೆಯಲ್ಲಿ ಇಟ್ಟನು.


ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.


ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು.


ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.


ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು