1 ಅರಸುಗಳು 7:6 - ಕನ್ನಡ ಸಮಕಾಲಿಕ ಅನುವಾದ6 22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಸೊಲೊಮೋನನು ಒಂದು ಕಂಬಮಂಟಪವನ್ನು ಕಟ್ಟಿಸಿದನು. ಅದರ ಉದ್ದ 22 ಮೀಟರ್; ಅಗಲ 13:5 ಮೀಟರ್, ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ; ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಲುಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೊಲೊಮೋನನು, “ಕಂಬಮಂಟಪ”ವನ್ನು ಸಹ ಕಟ್ಟಿಸಿದನು. ಅದರ ಉದ್ದ ಎಪ್ಪತ್ತೈದು ಅಡಿ ಮತ್ತು ಅಗಲ ನಲವತ್ತೈದು ಅಡಿ. ಅದರ ಮುಂಭಾಗದಲ್ಲೂ ಕಂಬಗಳಿಂದ ಕೂಡಿದ ಪಡಸಾಲೆಯಿತ್ತು. ಅಧ್ಯಾಯವನ್ನು ನೋಡಿ |