Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:8 - ಕನ್ನಡ ಸಮಕಾಲಿಕ ಅನುವಾದ

8 ತಾನು ವಾಸವಾಗಿರುವ ತನ್ನ ಅರಮನೆಯಲ್ಲಿ ಮಂಟಪದ ಒಳಭಾಗದಲ್ಲಿ ಈ ಕೆಲಸದ ಹಾಗೆಯೇ ಬೇರೆ ಒಂದು ಅಂಗಳವಿತ್ತು. ಇದಲ್ಲದೆ ಸೊಲೊಮೋನನು ತನ್ನ ಹೆಂಡತಿಯಾದ ಫರೋಹನ ಮಗಳಿಗೂ ಈ ಮಂಟಪದ ಹಾಗೆಯೇ ಇನ್ನೊಂದು ಮನೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನಗಾಗಿ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗಾಗಿ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನ್ಯಾಯಮಂದಿರದ ಹಿಂದಿನ ಪ್ರಾಕಾರಗಳಲ್ಲಿ ತನಗೋಸ್ಕರ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೊಲೊಮೋನನು ವಾಸಿಸುತ್ತಿದ್ದ ಮನೆಯು “ನ್ಯಾಯಮಂದಿರ”ದ ಒಳಗಿನ ಪ್ರಾಕಾರದಲ್ಲಿತ್ತು. ಈ ಮನೆಯನ್ನು “ನ್ಯಾಯಮಂದಿರ”ದಂತೆಯೇ ಕಟ್ಟಿಸಿದನು. ಇದಲ್ಲದೆ ಅವನು ಈಜಿಪ್ಟಿನ ಫರೋಹನ ಮಗಳಾದ ತನ್ನ ಹೆಂಡತಿಗೂ ಇದೇ ರೀತಿಯ ಮನೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:8
6 ತಿಳಿವುಗಳ ಹೋಲಿಕೆ  

ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು.


ಸೊಲೊಮೋನನು ಈಜಿಪ್ಟಿನ ಅರಸನಾದ ಫರೋಹನ ಸಂಗಡ ಬಂಧುತ್ವ ಮಾಡಿ, ಫರೋಹನ ಮಗಳನ್ನು ಮದುವೆಮಾಡಿಕೊಂಡನು. ಅವನು ತನ್ನ ಮನೆಯನ್ನೂ, ಯೆಹೋವ ದೇವರ ಆಲಯವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಸುತ್ತಲೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.


ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.


ಯೆಶಾಯನು ಅರಮನೆಯ ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಯೆಹೋವ ದೇವರ ವಾಕ್ಯವು ಅವನಿಗೆ ಬಂದಿತು,


ಇವೆಲ್ಲಾ ಒಳಗೂ, ಹೊರಗೂ ಅಸ್ತಿವಾರಗಳು ಮೊದಲುಗೊಂಡು, ಕಡೇ ವರಸೆಯವರೆಗೂ ಹೊರಗಿರುವ ದೊಡ್ಡ ಅಂಗಳದ ಮಟ್ಟಿಗೂ, ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲಾದ ಬೆಲೆಯುಳ್ಳ ಕೆತ್ತಿದ ಕಲ್ಲುಗಳಾಗಿದ್ದವು.


ಈಜಿಪ್ಟಿನ ಅರಸನಾದ ಫರೋಹನು ಹೊರಟುಹೋಗಿ, ಗೆಜೆರನ್ನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಅದನ್ನು ಬಹುಮಾನವಾಗಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು