Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:10 - ಕನ್ನಡ ಸಮಕಾಲಿಕ ಅನುವಾದ

10 ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ, ಮೇಘವು ಯೆಹೋವ ದೇವರ ಮಂದಿರವನ್ನು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕರು ಪರಿಶುದ್ಧಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಜಕರು ಪವಿತ್ರ ಪೆಟ್ಟಿಗೆಯನ್ನು ಮಹಾ ಪವಿತ್ರಸ್ಥಳದಲ್ಲಿ ಇಟ್ಟರು. ಯಾಜಕರು ಪವಿತ್ರಸ್ಥಳದಿಂದ ಹೊರಬಂದಾಗ, ಯೆಹೋವನ ಆಲಯವು ಮೋಡದಿಂದ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:10
11 ತಿಳಿವುಗಳ ಹೋಲಿಕೆ  

ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.


ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.


ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.


ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು