Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತರುವಾಯ ಸೊಲೊಮೋನನು - ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:12
12 ತಿಳಿವುಗಳ ಹೋಲಿಕೆ  

ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ


ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ. ಆ ಬೆಟ್ಟವು ಕತ್ತಲೆಯಾಗಿದ್ದು, ಮೇಘಗಳೂ, ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದವರೆಗೆ ಬೆಂಕಿಯಿಂದ ಉರಿಯುತ್ತಿತ್ತು.


ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.


ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು;


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಎಜ್ರನು ಸಕಲ ಜನರ ಕಣ್ಣು ಮುಂದೆ ದೇವರ ಗ್ರಂಥವನ್ನು ತೆರೆದನು. ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ನಿಂತಿದ್ದನು. ಅವನು ಅದನ್ನು ತೆರೆದಾಗ, ಜನರೆಲ್ಲರು ಎದ್ದು ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು