1 ಅರಸುಗಳು 8:13 - ಕನ್ನಡ ಸಮಕಾಲಿಕ ಅನುವಾದ13 ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಜವಾಗಿಯೂ ಅತ್ಯದ್ಭುತವಾದ ಆಲಯವನ್ನು ನಿನಗಾಗಿ ನಿರ್ಮಿಸಿರುವೆನು. ಈ ಸ್ಥಳದಲ್ಲಿ ನೀನು ಶಾಶ್ವತವಾಗಿ ನೆಲೆಸಿರಬಹುದು” ಎಂದು ಪ್ರಾರ್ಥನೆ ಮಾಡಿದನು. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.