1 ಅರಸುಗಳು 8:14 - ಕನ್ನಡ ಸಮಕಾಲಿಕ ಅನುವಾದ14 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಾದ ಮೇಲೆ ಅರಸನು ಎದ್ದುನಿಂತಿದ್ದ ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು. ಅಧ್ಯಾಯವನ್ನು ನೋಡಿ |
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.