1 ಅರಸುಗಳು 8:16 - ಕನ್ನಡ ಸಮಕಾಲಿಕ ಅನುವಾದ16 ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು - ನಾನು ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್‍ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿ |