1 ಅರಸುಗಳು 8:30 - ಕನ್ನಡ ಸಮಕಾಲಿಕ ಅನುವಾದ30 ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿ |