Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:42 - ಕನ್ನಡ ಸಮಕಾಲಿಕ ಅನುವಾದ

42 ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದವನಾದ ಒಬ್ಬ ಪರದೇಶೀಯನು ನಿಮ್ಮ ನಾಮಸ್ತುತಿಗಾಗಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಸೇರದವನಾದ ಇಂಥ ಒಬ್ಬ ಪರದೇಶಿಯು ನಿನ್ನ ನಾಮಕ್ಕೋಸ್ಕರ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:42
38 ತಿಳಿವುಗಳ ಹೋಲಿಕೆ  

“ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ?


ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.


ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಆದರೆ ಮಹಾಶಕ್ತಿಯಿಂದಲೂ, ಚಾಚಿದ ಭುಜಪರಾಕ್ರಮದಿಂದಲೂ ಈಜಿಪ್ಟ್ ದೇಶದಿಂದ ನಿಮ್ಮನ್ನು ಬರಮಾಡಿದ ಯೆಹೋವ ದೇವರಿಗೆ ನೀವು ಭಯಪಟ್ಟು, ಅವರೊಬ್ಬರಿಗೇ ಅಡ್ಡಬಿದ್ದು, ಬಲಿ ಅರ್ಪಿಸಿರಿ.


ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ಜನರು ಇದನ್ನು ಕೇಳಿದಾಗ ಭಯಪಡುವರು. ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವುದು.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ಈಗ ನನ್ನ ಕೈಚಾಚಿ ನಿನ್ನನ್ನೂ, ನಿನ್ನ ಜನರನ್ನೂ ಉಪದ್ರವದಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.


ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


“ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ.


ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು